ಮಿತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ: ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಇಡ್ಕಿದು ಗ್ರಾಮದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಶಾಲಾ ಶಿಕ್ಷಕ ಇಸ್ತಿಕಾರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮಗು ಇತರೆ ಮಕ್ಕಳಿಗೆ ತೊಂದರೆ ಮಾಡುದ್ದು ಹಾಗೂ ಈ ವಿಚಾರವಾಗಿ ಬೈದಾಗ ಅಲ್ಲಿಯೇ ಮೂತ್ರ ಮಾಡಿಕೊಂಡಿದ್ದು ನೀವು ಬಂದು ಮಗುವನ್ನು ಕರೆದುಕೊಂಡು ಹೋಗಿ ಎಂದು ಶಾಲೆಯ ಕಚೇರಿಯಿಂದ ಕರೆ ಬಂದಿದ್ದು ಆಗ ಮನೆಯಲ್ಲಿ ಯಾರೂ ಇರದ ಕಾರಣ ಮಗುವನ್ನು ನೀವೇ ಆಟೋದಲ್ಲಿ ಕಳಿಸಿ ಎಂದು ಹೆತ್ತವರು ತಿಳಿಸಿದ್ದಾರೆ.
ಮನೆಗೆ ಬಂದ ಮಗು ಶಾಲೆಯಲ್ಲಿ ಅಧ್ಯಾಪಕ ಇಸ್ತಿಕಾರ್ ನನಗೆ ಕೈಗೆ ಬೆತ್ತದಿಂದ ಬಲವಾಗಿ ಗಂಭೀರವಾಗಿ ಹಲ್ಲೆ ಮಾಡಿದ್ದು ಹಲ್ಲೆ ಮಾಡುವ ಸಂದರ್ಭ ನಾನು ಹೆದರಿ ಮೂತ್ರ ಮಾಡಿಕೊಂಡಿರುತ್ತೇನೆ ಎಂದು ಹೇಳಿದ್ದು ಆ ಪ್ರಕಾರ ಹೆತ್ತವರು ಶಾಲೆಯ ಶಿಕ್ಷಕ ಇಸ್ತಿಕಾರ್‌ಗೆ ಕರೆ ಮಾಡಿದಾಗ ಉಡಾಫೆ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಸೂಕ್ತ ನ್ಯಾಯ ಒದಗಿಸುವಂತೆ ಮತ್ತು ವಿನಾ ಕಾರಣ ಗಂಭೀರವಾಗಿ ಹಲ್ಲೆ ನಡೆಸಿದ ಶಿಕ್ಷಕನ ವಿರುದ್ಧ ವಿಟ್ಲ ಪೊಲೀಸರಿಗೂ ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೂ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.