×
Ad

ಮೊಂಟೆಪದವು: ಬ್ಯಾರಿ ಸಾಹಿತ್ಯ ಕಮ್ಮಟ

Update: 2023-08-18 17:01 IST

ಉಳ್ಳಾಲ: ಭಾಷೆಯಲ್ಲಿ ಹಿಡಿತ, ಸಾಹಿತ್ಯದಲ್ಲಿ ಹೆಚ್ಚಿನ ಆಸಕ್ತಿಯಿದ್ದರೆ ಮಾತ್ರ ಭಾಷೆಯ ಮೇಲೆ ಅಭಿಮಾನ ಮೂಡಲಿದೆ, ಸಾಹಿತ್ಯದಲ್ಲಿ ಬೆಳವಣಿಗೆ ಸಾಧಿಸಲು ಸಾಧ್ಯವಿದೆ. ಹಾಗಾಗಿ ಸಾಹಿತ್ಯದ ಬಗ್ಗೆ ವಿದ್ಯಾರ್ಥಿ ಜೀವನದಲ್ಲಿ ಆಸಕ್ತಿ ವಹಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಸಾಹಿತ್ಯದಲ್ಲಿ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಮೇಲ್ತೆನೆ ಗೌರವ ಅಧ್ಯಕ್ಷ ಆಲಿಕುಂಞಿಪಾರೆ ಹೇಳಿದರು.

ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್ ಪಿನ್ನೆ ಕಲಾವಿದಮಾರೊ ಕೂಟ ದೇರಳಕಟ್ಟೆ) ಇದರ ವತಿಯಿಂದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶುಕ್ರವಾರ ನಡೆದ ‘ಬ್ಯಾರಿ ಸಾಹಿತ್ಯ ಕಮ್ಮಟ’ ಉದ್ಘಾಟಿಸಿ ಅವರು ಮಾತನಾಡಿದರು.

ಮೇಲ್ತೆನೆಯ ಅಧ್ಯಕ್ಷ ಬಶೀರ್ ಕಲ್ಕಟ್ಟ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಹಂಝ ಮಲಾರ್ ಮತ್ತು ಕವಿ ಬಶೀರ್ ಅಹ್ಮದ್ ಕಿನ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ನರಿಂಗಾನ ಗ್ರಾಪಂ ಅಧ್ಯಕ್ಷ ನವಾಝ್ ಕೊಲ್ಲರಕೋಡಿ, ಕೆಪಿಎಸ್ ಪಿಯು ಕಾಲೇಜು ವಿಭಾಗದ ಅಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ, ಕೆಪಿಎಸ್ ಹೈಸ್ಕೂಲ್ ವಿಭಾಗದ ಅಧ್ಯಕ್ಷ ಮುರಳೀಧರ ಶೆಟ್ಟಿ,ಕೆಪಿಎಸ್ ಪ್ರಾಥಮಿಕ ವಿಭಾಗದ ಅಧ್ಯಕ್ಷ ಹನೀಫ್ ಶೈನ್, ಕೆಪಿಎಸ್ ಪ್ರಾಂಶುಪಾಲ ಸುರೇಶ್, ಉಪಪ್ರಾಂಶುಪಾಲ ಸಂತೋಷ್ ಕುಮಾರ್, ಶಿಕ್ಷಕ ವಸಂತ್ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮೇಲ್ತೆನೆಯ ಮಾಜಿ ಅಧ್ಯಕ್ಷ ಮುಹಮ್ಮದ್ ಬಾಷಾ ನಾಟೆಕಲ್, ಮಾಜಿ ಪ್ರಧಾನ ಕಾರ್ಯದರ್ಶಿ ಅಶೀರುದ್ದೀನ್ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಇಸ್ಮಾಯಿಲ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಅಶ್ರಫ್ ದೇರಳಕಟ್ಟೆ ಸ್ವಾಗತಿಸಿದರು. ಇಬ್ರಾಹಿಂ ನಡುಪದವು ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News