ಮೂಡುಬಿದಿರೆ | ಪುಚ್ಚೇರಿಕಟ್ಟೆಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಿಂದ ಛದ್ಮವೇಷ, ನೃತ್ಯ, ಆಟೋಟ ಸ್ಪರ್ಧೆ
Update: 2025-11-14 18:09 IST
ಮೂಡುಬಿದಿರೆ : ಪುಚ್ಚೇರಿಕಟ್ಟೆ ಅಂಗನವಾಡಿ ಕೇಂದ್ರ ಮತ್ತು ಕಿರಿಯ ಪ್ರಾಥಮಿಕ ಶಾಲಾ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ ಛದ್ಮವೇಷ, ನೃತ್ಯ, ಮಡಕೆ ಒಡೆಯುವ ಸ್ಪರ್ಧೆ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಪುರಸಭಾ ಸದಸ್ಯ ಪುರಂದರ ದೇವಾಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.
ಪುಟಾಣಿ ನಿಹಾಲಿಯನ್ನು 2025 ರ ರಾಣಿ ಎಂದು ಘೋಷಿಸಲಾಯಿತು.
ಎಸ್ ಡಿಎಂಸಿ ಅಧ್ಯಕ್ಷ ಭಾಸ್ಕರ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕ ಸುರೇಂದ್ರ ಪೂಜಾರಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವಿಜಯ ಸ್ವಾಗತಿಸಿದರು. ರಾಜಶ್ರೀ ವಂದಿಸಿದರು.