ಮೂಡುಬಿದಿರೆ: ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ; 8 ಮಂದಿ ಪೊಲೀಸ್ ವಶಕ್ಕೆ
Update: 2025-07-14 14:35 IST
ಮೂಡುಬಿದಿರೆ: ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಆಟದಲ್ಲಿನಿರತರಾಗಿದ್ದ 8,ಮಂದಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.
ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಅಕ್ಬರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ್ ಎಂದು ಗುರುತಿಸಲಾಗಿದೆ.
ಗಣೇಶ್, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ ಕೇಶವ ಯಾನೆ ಅಪ್ಪು ಹಾಗೂ ಇನ್ನಿತರರು ಓಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳಿಂದ ಹತ್ತು ಸಾವಿರ ನಗದು, ಎರಡು ದ್ವಿಚಕ್ರ ವಾಹನಗಳು ಹಾಗೂ ಆಟಕ್ಕೆ ಬಳಸಿದ್ದ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.