×
Ad

ಮೂಡಬಿದಿರೆ | ಡಿ.16ರಂದು ವಿಶೇಷ ಉಪನ್ಯಾಸ

Update: 2025-12-15 22:35 IST

ಸಾಂದರ್ಭಿಕ ಚಿತ್ರ

ಮೂಡಬಿದಿರೆ: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ, ಮೂಡಬಿದ್ರೆ ಶ್ರೀಮಹಾವೀರ ಪದವಿ ಪೂರ್ವ ಕಾಲೇಜು ಇವುಗಳ ಸಹಯೋಗದೊಂದಿಗೆ ಕುವೆಂಪು ನಾಟಕಗಳ ವಸ್ತು ಮತ್ತು ಆಕೃತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಿ.16ರಂದು ಬೆಳಗ್ಗೆ 11:30ಕ್ಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ್ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಲೆ.ವಿಜಯಲಕ್ಷ್ಮೀ ವಹಿಸಲಿರುವರು. ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಚಿನ್ನಸ್ವಾಮಿ ಎನ್. ಉಪಸ್ಥಿತರಿರುವರು. ಅಕಾಡೆಮಿ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News