×
Ad

ಮೂಡುಬಿದಿರೆ| ಮಹಿಳೆಗೆ ಹಲ್ಲೆ, ಜಾತಿ ನಿಂದನೆ: ಪ್ರಕರಣ ದಾಖಲು

Update: 2026-03-06 22:59 IST

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್‌ 5ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕೋಟೆಬಾಗಿಲು ಮಾರಿಗುಡಿ ಸಮೀಪ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನಲ್ಲಿ ನೀಡಿರುವ ಮಾಹಿತಿಯಂತೆ, ಆಸಿಫ್ ಎಂಬಾತನು ಮಹಿಳೆಯೊಂದಿಗೆ ವಾಗ್ವಾದ ನಡೆಸಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡುವ ಉದ್ದೇಶದಿಂದ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪವಿತ್ರ ಅವರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ 2023ರ ಸಂಬಂಧಿತ ಕಲಂಗಳು ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ಅಟ್ಟಹಾಸ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News