×
Ad

ಮುಡಿಪು | ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2026-01-26 20:35 IST

ಮುಡಿಪು: ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್–ಮಂಗಳೂರು ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅವರು ಭಾಗವಹಿಸಿ ಮಾತನಾಡಿ, ಮಕ್ಕಳು ತಮ್ಮ ಜೀವನವನ್ನು ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸದೊಂದಿಗೆ ನಡೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ನಹದ ಮಜೀದ್ ಅವರು ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸಫೂರಾ, ಆಡಳಿತಾಧಿಕಾರಿ ಮೊಯ್ದೀನ್, ಪಿಟಿಎ ಅಧ್ಯಕ್ಷ ಹನೀಫ್, ಕಾರ್ಯದರ್ಶಿ ಅಬ್ದುಲ್ ಖಾದರ್ ಸೇರಿದಂತೆ ಪಿಟಿಎ ಸದಸ್ಯರು ಉಪಸ್ಥಿತರಿದ್ದರು.








Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News