×
Ad

ಮೂಡುಬಿದಿರೆ: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Update: 2023-08-31 10:36 IST

ಮೂಡುಬಿದಿರೆ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೆಳುವಾಯಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಎಂದು ಗುರುತಿಸಲಾಗಿದೆ.

ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರೊಂದಿಗೆ ಸಂಸಾರ ನಡೆಸುತ್ತಿದ್ದ ಸಂತೋಷ್ ಅವರು ಮೂಡುಬಿದಿರೆಯ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ದುಡಿಯುತ್ತಿದ್ದರು.

ಗುರುವಾರ ಮುಂಜಾನೆ ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯಾವುದೇ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News