ಮುಲ್ಕಿ | ವಿಜೃಂಭಣೆಯಿಂದ ನಡೆದ ಕುಜಿಂಗಿರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ
ಮುಲ್ಕಿ : ಕುಜಿಂಗಿರಿ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ನಂದಿಗೋಣ ಹಾಗೂ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಚಂಡಿಕಾಯಾಗ, ಶ್ರೀ ರಕ್ತೇಶ್ವರೀ ದೇವಿಗೆ, ಪರಿವಾರದೈವಗಳಿಗೆ, ಶ್ರೀ ನಾಗದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಭಂಡಾರ ಇಳಿಯುವುದು, ನಂದಿಗೋಣ ಹಾಗೂ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಉದ್ಯಮಿ ರಾಮಮೂರ್ತಿ ರಾವ್ ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ದೇವಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್, ಗೋಪಿನಾಥ ರಾವ್, ಪುರಂದರ ಶೆಟ್ಟಿಗಾರ್, ರವಿ ಶೆಟ್ಟಿ ಪುನರೂರುಗುತ್ತು ಅವಿನಾಶ್ ಶೆಟ್ಟಿ ಪುನರೂರು ಬಾಳಿಕೆ ಮನೆ ಮತ್ತಿತರರು ಉಪಸ್ಥಿತರಿದ್ದರು