×
Ad

ಬಹುಕೋಟಿ ವಂಚನೆ ಪ್ರಕರಣ: ಜು.23ರಂದು ಸಿಐಡಿ ತಂಡ ಮಂಗಳೂರಿಗೆ ಆಗಮನ

Update: 2025-07-22 22:38 IST

ರೋಶನ್ ಸಲ್ಡಾನ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಿಹಾರ ಉದ್ಯಮಿಗೆ 10 ಕೋ.ರೂ. ವಂಚಿಸಿದ ಪ್ರಕರಣದ ತನಿಖೆಗೆ ಜು.23ರಂದು ಸಿಐಡಿ ತಂಡ ಮಂಗಳೂರಿಗೆ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.

ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಬಜಾಲ್ ಬೊಲ್ಲಗುಡ್ಡ ನಿವಾಸಿ ರೋಶನ್ ಸಲ್ಡಾನ ಎಂಬಾತ ನನ್ನು ಪೊಲೀಸರು ಬಂಧಿಸಿ ಇದೀಗ ವಿಚಾರಣೆ ತೀವ್ರಗೊಳಿಸಿದ್ದಾರೆ. ಈತ ದೇಶದ ನಾನಾ ಕಡೆಯಿಂದ ಕೋಟ್ಯಂತರ ರೂ. ವಂಚಿಸಿದ್ದು, ಈತನ ವಿರುದ್ಧ ದೂರುಗಳು ದಾಖಲಾಗುತ್ತಿವೆ.

*ಬಿಹಾರದ ಉದ್ಯಮಿಗೆ ರೋಶನ್ ರಿಯಲ್ ಎಸ್ಟೇಟ್ ವಿಚಾರದಲ್ಲಿ ಮೋಸ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಸಿಐಡಿಗೆ ವಹಿಸುವಂತೆ ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದರು. ಸರಕಾರ ಇದರ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ಅದರಂತೆ ಸಿಐಡಿ ತಂಡ ಮಂಗಳೂರಿಗೆ ಆಗಮಿಸಲಿದೆ.

ಆರೋಪಿಯು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಸಿಐಡಿ ತಂಡ ಮಂಗಳೂರಿಗೆ ಬಂದ ಬಳಿಕ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.

ಮಂಗಳೂರು ಪೊಲೀಸರು ಕೂಡ ಆರೋಪಿ ರೋಶನ್‌ನನ್ನು ಕಸ್ಟಡಿಗೆ ಪಡೆಯುವ ನಿಟ್ಟಿನಲ್ಲಿ ಪೂರಕ ದಾಖಲೆಗಳನ್ನು ಸಿದ್ಧಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News