×
Ad

ಉಜಿರೆಯ ಲಾಡ್ಜ್‌ನಲ್ಲಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

Update: 2025-08-29 19:25 IST

ಮಂಗಳೂರು, ಆ.29 ಬೆಳ್ತಂಗಡಿ ತಾಲೂಕಿನ ಉಜಿರೆಯ ವಸತಿಗೃಹದಲ್ಲಿ 2014ರ ಮಾರ್ಚ್ 1ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಬಾಳಪ್ಪ ಎಂ. ಕಳ್ಳೊಳ್ಳಿ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ನಿರೀಕ್ಷಕ ಲಿಂಗಪ್ಪಪೂಜಾರಿ ಬೆಳ್ತಂಗಡಿ ಸಿಜೆ ಮತ್ತು ಎಂಎಫ್‌ಸಿ ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಆರೋಪಿ ಬಾಳಪ್ಪನಿಗೆ ಜೀವಾವಧಿ ಶಿಕ್ಷೆ ಮತ್ತು 15,000 ದಂಡ (ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು) ಮತ್ತು 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುದ್ದಾರೆ. ಸರಕಾರಿ ಅಭಿಯೋಜಕರಾಗಿ ಜ್ಯೋತಿ ಪಿ. ನಾಯಕ್ ವಾದ ಮಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News