×
Ad

ಜ.12ರಿಂದ ಆಳ್ವಾಸ್‌ನಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ

85ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್2026

Update: 2026-01-11 20:30 IST

ಮಂಗಳೂರು: ಜನವರಿ 12ರಿಂದ16 ರವರೆಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ೮೫ನೇ ಅಖಿಲ ಭಾರತಪುರುಷ ಹಾಗೂ ಮಹಿಳೆಯರ ಅಂತರ್‌ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಲಾಗಿದೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿ ಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4288 ಅಥ್ಲೀಟ್‌ಗಳು ಹಾಗೂ ಸುಮಾರು1000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭ :-

ಜ.12 ರಂದು ಸಂಜೆ 4.30ಕ್ಕೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್  ಉದ್ಘಾಟಿಸಿ, ಕ್ರೀಡಾ ಜ್ಯೋತಿಯನ್ನುಸ್ವೀಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್, ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಶರಣಪ್ರಕಾಶ್ ಆರ್ ಪಾಟೀಲ ಮಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಡಾ ಭಗವಾನ್ .ಬಿ.ಸಿ, ಅಧ್ಯಕ್ಷತೆ ವಹಿಸಲಿ ದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಧ್ವಜಾರೋಹಣ ನೆರೆವೇರಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಎ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೂಡ್ಲಿಗಿ ಶಾಸಕ ಹಾಗೂ ಆರ್‌ಜಿಯು ಎಚ್‌ಎಸ್ ಸೆನೆಟ್ ಸದಸ್ಯರಾದ ಡಾ ಶ್ರೀನಿವಾಸ ಎನ್‌ಟಿ, ಮಾಗಡಿ ಶಾಸಕ ಹಾಗೂ ಆರ್‌ಜಿಯುಎಚ್‌ಎಸ್ ಸೆನೆಟ್ ಸದಸ್ಯರಾದ ಎಚ್‌ಸಿ ಬಾಲಕೃಷ್ಣ, ಶಿವಾಜಿ ನಗರದ ಶಾಸಕ ಹಾಗೂ ಆರ್‌ಜಿಯುಎಚ್‌ಎಸ್ ಸೆನೆಟ್‌ರಾದ ಸದಸ್ಯ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಹಾಗೂ ಆರ್‌ಜಿಯುಎಚ್‌ಎಸ್ ಸೆನೆಟ್ ಸದಸ್ಯರಾದ ಪುಟ್ಟಣ್ಣ ಹಾಗೂ ಗೋವಿಂದ ರಾಜ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ‍್ಯದರ್ಶಿ ಮೊಹಮ್ಮದ್ ಮೊಹಸಿನ್, ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ. ಬಿಎಲ್ ಸುಜಾತಾ ರಾಥೋಡ್ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ.ಪಿ ಕ್ಷೇತ್ರದ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿರುವರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 6ನೇ ಬಾರಿಗೆ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ನ್ನು ಆಯೋಜಿಸುತ್ತಿದೆ. ಈ ಹಿಂದೆ72,75 ಹಾಗೂ 80ನೇ ಕ್ರೀಡಾಕೂಟವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಹಾಗೂ 79,81ಕ್ರೀಡಾಕೂಟವನ್ನು ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಿತ್ತು ಎಂದವರು ಮಾಹಿತಿ ನೀಡಿದರು.

ಇದೀಗ 85ನೇ ಕ್ರೀಡಾಕೂಟವನ್ನು ರಾಜೀವ್ ಗಾಂಧಿವಿಜ್ಞಾನ ವಿವಿಗಳ ಆಶ್ರಯದಲ್ಲಿ 4ನೇ ಬಾರಿ ಆಯೋಜಿಸಲಾಗುತ್ತಿದೆ. ಸುಸಜ್ಜಿತ ಸಿಂಥಟಿಕ್ ಟ್ರ್ಯಾಕ್ ನಲ್ಲಿ ಕ್ರೀಡಾಕೂಟವು ಹೊನಲು ಬೆಳಕಿನ ವ್ಯವಸ್ಥೆಯಲ್ಲಿ ನಡೆಯಲಿದೆ.

ಅತ್ಯಾಧುನಿಕ ಫೋಟೋ ಫಿನಿಶಿಂಗ್ ತಂತ್ರಜ್ಞಾನದ ವ್ಯವಸ್ಥೆಯನ್ನು ಮಾಡಲಾಗಿದೆ. ಕ್ರೀಡಾಕೂಟವನ್ನು ಖೇಲೋ ಇಂಡಿಯಾ ಹಾಗೂ ಅಂತರಾಷ್ಟ್ರೀಯ ವಿಶ್ವವಿ ದ್ಯಾಲಯಗಳ ಕ್ರೀಡಾಕೂಟಕ್ಕೆ ಮಾನ ದಂಡವಾಗಿ ಪರಿಗಣಿಸಲಾಗುವುದು. ಪ್ರತಿದಿನ ರಾತ್ರಿ 7 ಗಂಟೆಗೆ ಅದ್ಧೂರಿಯಾದ ವಿಜಯ ವೇದಿಕೆಯಲ್ಲಿ ಪದಕ ವಿಜೇತರನ್ನು ಗೌರವಿಸಲಾಗುವುದು ಎಂದು ಮೋಹನ್ ಆಳ್ವ ತಿಳಿಸಿದ್ದಾರೆ.

ವಿಜೇತರಿಗೆ ನಗದು ಪುರಸ್ಕಾರ; ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ

ಕ್ರೀಡಾಕೂಟದ ಸ್ಪರ್ಧೆಗಳು ಜನವರಿ 12ರಂದು ಬೆಳಗ್ಗೆ 6.30ರಿಂದಲೇ ಆರಂಭವಾಗಲಿದ್ದು, ಅಂದು ಸಂಜೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಅಪರಾಹ್ನ 4.30ಕ್ಕೆ ಭವ್ಯ ಮೆರವಣಿಗೆ

ನಡೆಯಲಿದೆ. ನಮ್ಮ ರಾಷ್ಟ್ರದ ವಿವಿಧ ಕಲೆ-ಸಂಸ್ಕೃತಿಗಳನ್ನು ಬಿಂಬಿಸುವ ಕಲಾತಂಡಗಳು ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಪಥಸಂಚಲನದ ನಂತರ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ.

ವಿಜೇತರಿಗೆ 20 ಲಕ್ಷಕ್ಕೂ ಅಧಿಕ ಮೊತ್ತದ ನಗದು ಪುರಸ್ಕಾರವಿಜೇತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಗದು ಪುರಸ್ಕಾರ ಪ್ರಥಮ ಸ್ಥಾನ

ಪಡೆದವರಿಗೆ15 ಸಾವಿರ ರೂ, ದ್ವಿತೀಯ10ಸಾವಿರ ರೂ ಹಾಗೂ ತೃತೀಯ 5ಸಾವಿರ ರೂ, ಕೂಟ ದಾಖಲೆ ನಿರ್ಮಿಸಿದ ವರಿಗೆ 25ಸಾವಿರ ರೂ, ಸಮಗ್ರ ಪ್ರಶಸ್ತಿ ವಿಜೇತ ತಂಡಕ್ಕೆ 50ಸಾವಿರ ರೂ, ರನ್ನರ್ ಅಪ್ 30 ಸಾವಿರ ರೂ, ತೃತಿಯ ಸ್ಥಾನ 20 ಸಾವಿರ ರೂ ನಗದು ಪುರಸ್ಕಾರ ನೀಡುವುದಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಘೋಷಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ, ಬೆಂಗಳೂರು ಇದರ ಸಿಂಡಿಕೇಟ್ ಸದಸ್ಯರಾದ ಡಾ ಇಪ್ತಿಕರ್ ಆಲಿ, ಡಾ ಶಿವಶರಣ್,ಸೆನೆಟ್ ಸದಸ್ಯರಾದ ಡಾ ವೈಶಾಲಿ ಶ್ರೀಜಿತ್, ಉಪಕುಲಪತಿಗಳು ಡಾ ಬಿ ವಸಂತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News