×
Ad

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

Update: 2025-11-11 23:14 IST

ಸುಳ್ಯ, ನ.11: ಸುಳ್ಯದ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವತಿಯಿಂದ ಮೌಲಾನ ಅಬುಲ್ ಕಲಾಂ ಆಝಾದ್‌ ಜನ್ಮ ದಿನ ಮತ್ತು ರಾಷ್ಟ್ರೀಯ ಶಿಕ್ಷಣ ದಿನವನ್ನು ಮಂಗಳವಾರ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕ್ವಿಝ್ ಏರ್ಪಡಿಸಲಾಗಿತ್ತು

ಅಧ್ಯಕ್ಷತೆ ವಹಿಸಿದ್ದ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ.ಎಂ.ಮುಸ್ತಫ ಮಾತನಾಡಿ, ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವ ಮೌಲಾನ ಅಬುಲ್ ಕಲಾಂ ಆಝಾದ್ ರವರ ಶಿಕ್ಷಣದ ದೂರದೃಷ್ಟಿಯು ಇಂದು ನಮ್ಮ ದೇಶದ ಶಿಕ್ಷಣದ ಗುಣಮಟ್ಟವು ವಿಶ್ವ ಮಾನ್ಯತೆ ಪಡೆಯಲು ಸಹಕಾರಿಯಾಗಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಟಣ ಮಾತನಾಡಿ, ಮೌಲಾನಾ ಅಬುಲ್ ಕಲಾಂ ಸ್ವಾತಂತ್ರ್ಯ ಹೋರಾಟದಲ್ಲಿ ವಹಿಸಿದ ಪಾತ್ರ ನಮಗೆ ಮಾರ್ಗದರ್ಶಿ ಎಂದರು.

ವೇದಿಕೆಯಲ್ಲಿ ಶಿಕ್ಷಕಿಯರಾದ ಜಯಂತಿ ಮತ್ತು ದೇವಕಿ ಉಪಸ್ಥಿತರಿದ್ದರು. ಶಿಕ್ಷಕ ರಂಜಿತ್ ಸ್ವಾಗತಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News