×
Ad

ಮಿಜಾರು ಅದರ್ಶ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

Update: 2023-11-13 18:45 IST

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ. ಮತ್ತು ಉಡುಪಿ ಜಿಲ್ಲೆ ಹಾಗೂ ಮಿಜಾರಿನ ಆದರ್ಶ ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಶನಿವಾರ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು.

ಮೀಫ್ ಅಧ್ಯಕ್ಷ ಮೂಸಬ್ಬ ಬ್ಯಾರಿ ಕಾರ್ಯಕ್ರಮ ಉದ್ಘಾಟಿಸಿದರು. ಮೀಫ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಅಹ್ಮದ್ ಕಣ್ಣೂರು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಮಹತ್ವ ಮತ್ತು ಮೌಲಾನ ಅಬ್ದುಲ್ ಆಝಾದ್‌ರ ವ್ಯಕ್ತಿತ್ವದ ಬಗ್ಗೆ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಬಗ್ಗೆ ಅರಿವು ಮೂಡಿಸಲು ಮಕ್ಕಳಿಗೆ ಏರ್ಪಡಿಸಲಾದ ರಸಪ್ರಶ್ನೆಯನ್ನು ಶಿಕ್ಷಕಿ ರಫೀದಾ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ‘ಮೀಫ್’ ಸಂಘಟನೆಯ ಅಧ್ಯಕ್ಷ ಮೂಸಬ್ಬ ಬ್ಯಾರಿ ಅವರನ್ನು ಆದರ್ಶ ವಿದ್ಯಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಪ್ರಾಂಶುಪಾಲೆ ಡಾ. ಶಾಂತಿ ವಿಜಯ್ ಪ್ರಾಸ್ತಾವಿಕ ಮಾತುಗಳನ್ನಡಿದರು. ಮೀಫ್ ಈಸ್ಟ್ ಝೋನ್ ಉಪಾಧ್ಯಕ್ಷ ಮುಸ್ತಫ, ಆದರ್ಶ ವಿದ್ಯಾಸಂಸ್ಥೆಯ ಸಂಚಾಲಕ ಎಂ.ಎಸ್. ಮುಹಮ್ಮದ್, ಆದರ್ಶ ಎಜುಕೇಶನಲ್ ಸೊಸೈಟಿಯ ಸದಸ್ಯ ಅಬೂಬಕ್ಕರ್ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಷಾಹಿಸ್ತಾ ಸ್ವಾಗತಿಸಿದರು. ಲತಾ ವಂದಿಸಿದರು. ವಿವೇಟ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.










Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News