ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ
ಕೊಣಾಜೆ: ಮಂಗಳೂರು ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಮಂಗಳೂರು ವಿಶ್ವವಿದ್ಯಾನಿಲಯದ ಯು.ಆರ್.ರಾವ್ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಮಂಜಯ್ಯ ಡಿ.ಎಚ್. ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಡಂತ್ಯಾರ್ ಸೇಕ್ರೇಡ್ ಹಾರ್ಟ್ ಕಾಲೇಜಿನ ನಿವೃತ್ತ ಹಿರಿಯ ಗ್ರಂಥಪಾಲಕರಾದ ಪೌಲ್ ಮಿನೇಜಸ್ ಅವರು ಸ್ವಾಫ್ಟ್ ಸ್ಕಿಲ್ ಅನ್ನು ಗ್ರಂಥಾಲಯದಲ್ಲಿ ಯಾವ ರೀತಿ ಉಪಯೋಗಿಸಬೇಕು, ಅದರ ಉಪಯೋಗವೇನು ಎಂಬುದರ ಕುರಿತು ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ.ಉಮೇಶ್ ನ್ಯಾಕ್ ಪ್ರಾಸ್ತವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ರೀತಿಯ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ವಿಭಾಗದ ವಿದ್ಯಾರ್ಥಿಗಳಾದ ಹಂಶಿತಾ, ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರತೀಕ್ಷಾ ಸ್ವಾಗತಿಸಿದರು, ಗೊಕುಲ್ ಕುಮಾರ್ ವಂದಿಸಿದರು.