×
Ad

ನೆಲ್ಯಾಡಿ | ಪಡುಬೆಟ್ಟು ಸೌಹಾರ್ದ ಫ್ರೆಂಡ್ಸ್ ಕ್ಲಬ್ ಉದ್ಘಾಟನೆ, ರಕ್ತದಾನ ಶಿಬಿರ

Update: 2025-11-04 14:47 IST

ನೆಲ್ಯಾಡಿ: ಸೌಹಾರ್ದ ಫ್ರೆಂಡ್ಸ್ ಕ್ಲಬ್ ಪಡುಬೆಟ್ಟು, ನೆಲ್ಯಾಡಿ ಇದರ ಉದ್ಘಾಟನೆ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸೌಹಾರ್ದ ಫ್ರೆಂಡ್ಸ್ ಕ್ಲಬ್ ಪಡುಬೆಟ್ಟು ಇದರ ಅಧ್ಯಕ್ಷರಾದ ಹನೀಫ್ ಝಮ್ ಝಮ್ ರವರು ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಮಹಾಲಿಂಗ ಕೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಲಾಂ ಬಿಲಾಲ್, ರೋಟರಿ ಕ್ಲಬ್ ಪುತ್ತೂರು ಇದರ ವೈದ್ಯರಾದ ಡಾ. ಸೀತಾರಾಮ ಭಟ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಗಂಗಾಧರ ಶೆಟ್ಟಿ ಹೊಸಮನೆ, ಶಾಲಾ SDMC ಅಧ್ಯಕ್ಷರಾದ ಉಮೇಶ್ ಗೌಡ, ಉಪಾಧ್ಯಕ್ಷರಾದ ರಫೀಕ್ ಉಳಿತೊಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವಿಚಂದ್ರ, ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಕುಶಾಲಪ್ಪ, ಸಾಮಾಜಿಕ ಕಾರ್ಯಕರ್ತರಾದ ಹೆರಾಲ್ಡ್ ಡಿಸೋಜ, ಸೀತಾರಾಮ ಕಾನಮನೆ, ಕಬೀರ್ ತಾಜ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸಮೀರುದ್ದೀನ್ ಪಡುಬೆಟ್ಟು ಸ್ವಾಗತಿಸಿದರು. ಕೋಶಧಿಕಾರಿ ತೌಫಿಕ್ ಪಡುಬೆಟ್ಟು ವಂದಿಸಿದರು. ಸಿನಾನ್ ಪಡುಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News