×
Ad

ನೇರಳಕಟ್ಟೆ : ಸೆ.24ರಂದು ಸಕ್ಸಸ್ ಕ್ರಿಕೆಟರ್ಸ್ ವತಿಯಿಂದ ರಕ್ತದಾನ ಶಿಬಿರ

Update: 2023-09-22 23:26 IST

ಬಂಟ್ವಾಳ : ಸಕ್ಸಸ್ ಕ್ರಿಕೆಟರ್ಸ್ ಕುಕ್ಕರಬೆಟ್ಟು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಆಶ್ರಯದಲ್ಲಿ ಯೆನೆಪೋಯ ರಕ್ತನಿಧಿ ದೇರಳಕಟ್ಟೆ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಸೆ.24 ರಂದು ನೇರಳಕಟ್ಟೆ ಸಮೀಪದ ಕುಕ್ಕರಬೆಟ್ಟು ಜಂಕ್ಷನ್ ನಲ್ಲಿ ನಡೆಯಲಿದೆ.

ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಖತೀಬ್ ಸಹೀದ್ ಮನ್ನಾನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು, ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಅಹ್ಮದ್ ಹಾಜಿ ಮಿತ್ತೂರು, ಹಾಜಿ ಸಿರಾಜ್ ಅಹಮದ್, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಮಿತ್ತೂರು ಮಸೀದಿ ಅಧ್ಯಕ್ಷ ಕೆ.ಬಿ.ಸಲೀಂ ಹಾಜಿ, ಪರ್ಲೊಟ್ಟು ಮಸೀದಿ ಅಧ್ಯಕ್ಷ ದರ್ಬಾರ್ ಅಬ್ದುಲ್ ಖಾದರ್, ಕೊಡಾಜೆ ಮಸೀದಿ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್, ಪಾಟ್ರಕೋಡಿ ಮಸೀದಿ ಅಧ್ಯಕ್ಷ ಉಮ್ಮರ್ ಕರಿಮಜಲ್ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News