×
Ad

ವೆನ್‌ಲಾಕ್ ಆಸ್ಪತ್ರೆಗೆ ಶೀಘ್ರವೇ ಹೊಸ ಡಯಾಲಿಸಿಸ್ ಯಂತ್ರಗಳು: ದಿನೇಶ್ ಗುಂಡೂರಾವ್

Update: 2023-10-18 18:57 IST

ಮಂಗಳೂರು: ವೆನ್‌ಲಾಕ್ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಸುಮಾರು 10 ಹೊಸ ಡಯಾಲಿಸಿಸ್ ಯಂತ್ರಗಳು ಬರಲಿದ್ದು, ಹೊಸ ಏಜೆನ್ಸಿಗೆ ಟೆಂಡರ್ ನೀಡಲಾಗಿದೆ ಎಂದು ರಾಜ್ಯದ ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವೆನ್‌ಲಾಕ್ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಕುರಿತಂತೆ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ ಅವರು ಈ ವಿಷಯ ತಿಳಿಸಿದರು.

ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ಹಾಗೂ ರೋಗಿಗಳ ದೂರನ್ನು ಆಲಿಸಿದ ಅವರು, ಕೇಂದ್ರದಲ್ಲಿ ಎಸಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೋಗಿಗಳು ಡಯಾಲಿಸಿಸ್ ಮಾಡಿಸಿಕೊಳ್ಳಲು ಗಂಟೆಗಟ್ಟಲೆ ಇರಬೇಕಾಗುತ್ತದೆ. ಹಾಗಾಗಿ ಅಲ್ಲಿ ಎಸಿ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದರಲ್ಲದೆ, ಆಸ್ಪತ್ರೆಯ ನೆಪ್ರೋಲಾಜಿ ತಜ್ಞ ವೈದ್ಯರ ಸೇವೆಯನ್ನು ಡಯಾಲಿಸಿಸ್ ಕೇಂದ್ರದಲ್ಲಿ ಬಳಸಿಕೊಳ್ಳು ವಂತೆ ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವೆನ್‌ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶ್ಯಾನುಭಾಗ್ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News