×
Ad

ಗಾಂಧಿ ಜಯಂತಿ ಪ್ರಯುಕ್ತ ಮಂಗಳೂರು ವಿವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Update: 2023-10-02 15:56 IST

ಕೊಣಾಜೆ, ಅ.2: ಮಂಗಳೂರು ವಿಶ್ವವಿದ್ಯಾನಿಲಯದ ಎನ್ನೆಸ್ಸೆಸ್ ಮಂಗಳಗಂಗೋತ್ರಿ ಘಟಕ ಹಾಗೂ ಮಂಗಳಗಂಗೋತ್ರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕದ ಆಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.

ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ.ಜಯರಾಜ್ ಅಮೀನ್ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಳೂರು ವಿವಿ ಎನ್ನೆಸ್ಸೆಸ್ ಘಟಕದ ನೋಡೆಲ್ ಅಧಿಕಾರಿ ಡಾ.ಗೋವಿಂದ ರಾಜು, ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಪ್ರಿಯಾ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಂಗಳೂರು ವಿವಿ ಸ್ವಚ್ಛತಾ ಸಿಬ್ಬಂದಿಯಾದ ರೋಹಿಣಿ, ವಿಜಯಲಕ್ಷ್ಮಿ, ಇಂದಿರಾ, ಸದಾನಂದರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕ ಮಿಯಾಝ್ ವಂದಿಸಿದರು. ಉಪನ್ಯಾಸಕಿ ಕಾಜಲ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News