×
Ad

ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಆಸ್ಪತ್ರೆಗೆ ದಾಖಲು

Update: 2023-10-06 21:04 IST

ಡಾ.ರೇಣುಕಾ ಪ್ರಸಾದ್‌

ಮಂಗಳೂರು, ಅ.6: ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್‌ನ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2011ರ ಎ.28ರಂದು ನಡೆದಿದ್ದ ಈ ಕೊಲೆ ಪ್ರಕರಣದಲ್ಲಿ ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ಭವಾನಿ ಶಂಕರ್, ವಾಮನ ಪೂಜಾರಿ ಎಂಬವರಿಗೆ ಗುರುವಾರ ರಾಜ್ಯ ಹೈಕೊರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನೊಬ್ಬ ಪ್ರಮುಖ ಆರೋಪಿ ಆಕಾಶ್ ಭವನ್ ಶರಣ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಪ್ರಕರಣದಲ್ಲಿ ಏಳನೇ ಆರೋಪಿಯಾಗಿದ್ದ ಎಚ್.ಯು. ನಾಗೇಶ್ ಕುಮಾರ್ ಎಂಬಾತನನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು.

ಜೀವಾವಧಿ ಶಿಕ್ಷೆಗೊಳಗಾಗಿದ್ದ ಇತರ ಆರೋಪಿಗಳು ಸದ್ಯ ಮಂಗಳೂರು ಜೈಲಿನಲ್ಲಿದ್ದು, ಶೀಘ್ರದಲ್ಲೇ ರಾಜ್ಯದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News