×
Ad

ಸುಳ್ಯ: ನಾಪತ್ತೆಯಾಗಿದ್ದ ಪೆರುವಾಜೆಯ ಬಾಲಕ ಮೈಸೂರಿನಲ್ಲಿ ಪತ್ತೆ

Update: 2023-11-19 12:28 IST

ಸುಳ್ಯ, ನ.19: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕದ ವಿದ್ಯಾರ್ಥಿಯೋರ್ವ ಮೈಸೂರಿನಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಮೂಲತಃ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಫ್ ಎಂಬವರ ಪುತ್ರ ಅಬೀಲ್ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದ ಈತ ಅಲ್ಲಿಂದ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದಾತ ಹಿಂದಿರುಗಿ ಬಂದಿರಲಿಲ್ಲ. ಈ ಬಗ್ಗೆ ಪೋಷಕರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅಬೀಲ್ ನನ್ನು ಪೊಲೀಸರು ಶನಿವಾರ ರಾತ್ರಿ ಮೈಸೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಳಿಕ ಪೊಲೀಸರು ಫೋನ್ ಮುಖಾಂತರ ಆತನ ಮನೆಯವರಿಗೆ ತಿಳಿಸಿದ್ದು ಮನೆಯವರು ರಾತ್ರಿ ಮೈಸೂರಿಗೆ ತೆರಳಿ ಇಂದು ಬೆಳಗ್ಗೆ ಆತನನ್ನು ಕುಂಡಡ್ಕ ಮನೆಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದುಬಂದಿದೆ.

ಆತ ಏಕೆ ಮೈಸೂರಿಗೆ ಹೋಗಿದ್ದಾನೆ ಎಂಬುದು ತಿಳಿದುಬಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News