ಮುಹಮ್ಮದ್ ಮಸೂದ್‌ರ ಮನೆಗೆ ಭೇಟಿ
Update: 2023-11-28 22:10 IST
ಮಂಗಳೂರು : ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ಮತ್ತವರ ಕಾರ್ಯದರ್ಶಿ ಮುಜೀಬುಲ್ಲಾ ಝಪಾರಿ ಅವರು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ, ಮಾಜಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ಉಪಾಧ್ಯಕ್ಷರಾದ ಕೆ. ಅಶ್ರಫ್, ಹಾಜಿ ಕೆ.ಪಿ. ಅಹ್ಮದ್ ಪುತ್ತೂರು, ಕಾರ್ಯದರ್ಶಿಗಳಾದ ಡಾ. ಮುಹಮ್ಮದ್ ಆರೀಫ್ ಮಸೂದ್, ಬಿ.ಎಸ್. ಇಮ್ತಿಯಾಝ್ ಉಪಸ್ಥಿತರಿದ್ದರು.