×
Ad

ಆರೋಗ್ಯ ಜಾಗೃತಿಗೆ ರೆಡ್‌ಕ್ರಾಸ್ ಹೆಚ್ಚಿನ ಆದ್ಯತೆ: ಸಿಎ ಶಾಂತರಾಮ ಶೆಟ್ಟಿ

Update: 2023-11-28 22:14 IST

ಮಂಗಳೂರು : ವಿದ್ಯಾರ್ಥಿಗಳು ಶಿಕ್ಷಣ, ಸಂಸ್ಕಾರದ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಕೂಡಾ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ರೆಡ್‌ಕ್ರಾಸ್ ಸೊಸೈಟಿಯು ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಹೇಳಿದರು.

ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಯುವ ರೆಡ್‌ಕ್ರಾಸ್, ನರ್ಸಿಂಗ್ ಕಾಲೇಜು ಹಾಗೂ ಆಯುರ್ವೇದ ವೈದ್ಯಕೀಯ ಕಾಲೇಜು ಯೇನೆಪೋಯ (ಡೀಮ್ಡ್ ಟುಬಿ )ವಿ.ವಿ., ಎನ್‌ಎಸ್‌ಎಸ್ ಮತ್ತು ಯುವ ರೆಡ್‌ಕ್ರಾಸ್ ಘಟಕ ಸರಕಾರಿ ಮಹಿಳಾ ಕಾಲೇಜು ಬಲ್ಮಠ ಇವುಗಳ ಸಹಯೋಗದಲ್ಲಿ ಬಲ್ಮಠದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಕ್ಯಾನ್ಸರ್ ರೋಗ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಬಾಳ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ.ಜಲಾಲುದ್ದೀನ್ ಅಕ್ಬರ್, ಯೆನೆಪೊಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ ಕೆ.ಸಿ., ಅಸೋಸಿಯೇಟ್ ಪ್ರೊಫೆಸರ್ ಜಾನೆಟ್ ಮಿರಾಂಡ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ನಿರ್ದೇಶಕರಾದ ಡಾ.ಬಿ. ಸಚ್ಚಿದಾನಂದ ರೈ, ಪಿ.ಬಿ.ಹರೀಶ್ ರೈ, ಗುರುದತ್ತ್ ಎಂ.ನಾಯಕ್, ಮಂಗಳೂರು ವಿ.ವಿ. ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ ಅಮೀನ್, ಡಾ.ರಾಜೇಶ್ ಶೆಟ್ಟಿ ಭಾಗವಹಿಸಿದ್ದರು.

ಯೆನೆಪೊಯ ಡೆಂಟಲ್ ಕಾಲೇಜಿನ ಡಾ.ರಚನಾ ಪ್ರಭು, ಯೆನೆಪೊಯ ವಿ.ವಿ.ಯ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಅಶ್ವಿನಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಈ ಸಂದರ್ಭ ಬಲ್ಮಠದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಆರಂಭವಾಗಲಿರುವ ‘ಹದಿಹರೆಯದ ಮಾನಸಿಕ ಆರೋಗ್ಯ ಕೌನ್ಸಲಿಂಗ್’ ೯ ತಿಂಗಳ ಉಚಿತ ಸರ್ಟಿಫಿಕೆಟ್ ಕೋರ್ಸ್ ಬಗ್ಗೆ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿ ಜತೆ ಒಡಂಬಡಿಕೆ ಪತ್ರ ವಿನಿಮಯ ಮಾಡಿಕೊಳ್ಳಲಾಯಿತು. ಮೂವರು ಫಲಾನುಭವಿಗಳಿಗೆ ರೆಡ್‌ಕ್ರಾಸ್ ಸೊಸೈಟಿ ವತಿಯಿಂದ ಉಚಿತ ಗಾಲಿಕುರ್ಚಿ ವಿತರಿಸಲಾಯಿತು.

ಯುವ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕ ಸಚೇತ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಲ್ಮಠ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸುಮನ ಬಿ. ಸ್ವಾಗತಿಸಿದರು. ಡಾ.ಮೀನಾಕ್ಷಿ ಆಚಾರ್ಯ ವಂದಿಸಿದರು. ಯೆನೆಪೊಯ ವಿ.ವಿ. ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ನಿತ್ಯಾಶ್ರೀ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News