×
Ad

ಉಪ್ಪಿನಂಗಡಿ: ಯುನಿವೆಫ್ ನಿಂದ ಸೀರತ್ ಸಮಾವೇಶ

Update: 2023-12-01 15:20 IST

ಉಪ್ಪಿನಂಗಡಿ, ಡಿ.1: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ಉಪ್ಪಿನಂಗಡಿ ಎಚ್.ಎಂ.ಆಡಿಟೋರಿಯಂನಲ್ಲಿ ಸೀರತ್ ಸಮಾವೇಶ ಜರಗಿತು.

ಕಾರ್ಯಕ್ರಮದಲ್ಲಿ ನಿಮ್ರಾ ಮಸೀದಿಯ ಖತೀಬ್ ಹಾಗೂ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ, 'ಪ್ರವಾದಿ ಮುಹಮ್ಮದ್ (ಸ) ರ ಮಾದರಿ ಜೀವನ' ಎಂಬ ವಿಷಯದಲ್ಲಿ ಪ್ರಮುಖ ಭಾಷಣ ಮಾಡಿದರು.

ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯ ಎಂ.ಬಿ.ನಝೀರ್ ಮಠ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.

ಅಭಿಯಾನ ಸಂಚಾಲಕ ಸೈಫುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮರ್ ಮುಖ್ತಾರ್ ಕಿರಾಅತ್ ಪಠಿಸಿದರು. ಉಬೈದುಲ್ಲಾ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News