×
Ad

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2023-12-01 18:16 IST

File Photo 

ಮಂಗಳೂರು : ಪ್ರಸಕ್ತ (2023-24) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನ ಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

*ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP)ಯಲ್ಲಿ 1ನೇ ತರಗತಿಯಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.೮ ಕೊನೆಯ ದಿನವಾಗಿದೆ.

*ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿ ಗಳಿಗೆ ದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಸೇವಾ ಸಿಂಧು ಪೋರ್ಟಲ್ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಅದರ ಪ್ರತಿಯನ್ನು ಸೂಕ್ತ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-೧೬ಸಿ, ಮೌಲಾನಾ ಅಬ್ದುಲ್ ಕಲಾಂ ಆಝಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, ವಸಂತ ನಗರ, ಬೆಂಗಳೂರು-೫೬೦೦೫೨ಕ್ಕೆ ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ತಿಳಿಸಲಾಗುವುದು.

* ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ (IIT , IIM , IIIT , NIT , IISER , AIIMS , NLU , INI & IuSLA) ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಡಿ.12 ಕೊನೆಯ ದಿನವಾಗಿದೆ.

ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅದರ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16 ಸಿ, ಮೌಲಾನಾ ಅಬ್ದುಲ್ ಕಲಾಂ ಅಝಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, ವಸಂತ ನಗರ, ಬೆಂಗಳೂರು - 560052ಕ್ಕೆ ಸಲ್ಲಿಸಬೇಕು.

*ಎಂಫಿಲ್ ಮತ್ತು ಪಿಎಚ್‌ಡಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಲು ಡಿ.15ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News