×
Ad

ವಿದ್ಯಾರ್ಥಿಗಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಸ್ಪೂರ್ತಿ : ವೇದವ್ಯಾಸ್ ಕಾಮತ್

Update: 2023-12-01 22:31 IST

ಮಂಗಳೂರು,ಡಿ.1: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಸ್ಫೂರ್ತಿ ಯಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಶುಕ್ರವಾರ ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವಿದ್ಯಾರ್ಥಿಗೆ ಪ್ರತಿಭಾ ಕಾರಂಜಿಯ ಅವಶ್ಯಕತೆ ಇದೆ. ಇದು ಮಕ್ಕಳಲ್ಲಿರುವ ಬೇರೆ ಬೇರೆ ರೀತಿಯ ಕಲೆಗಳನ್ನು ಪ್ರದರ್ಶಿ ಸಲು ಅವರ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಒಳ್ಳೆಯ ವೇದಿಕೆಯಾಗಿದೆ. ಇಂದು 700ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿರುವ ಈ ಕಾರ್ಯಕ್ರಮದಿಂದ ಮಕ್ಕಳ ಉದಯೋನ್ಮುಖ ಪ್ರತಿಭೆ ದೀಪದಂತೆ ಬೆಳಗಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಯಾನಂದಆರ್.ನಾಯಕ್, ರಾಮಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಡಾ. ಬಿ.ಸಂಜೀವ ರೈ, ಶಾಲಾ ಮುಖ್ಯ ಶಿಕ್ಷಕಿ ವೀಣಾ ಕೆ. ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News