×
Ad

ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಹರೇಕಳ ಹಾಜಬ್ಬ

Update: 2023-12-02 21:10 IST

ಕುತ್ಲೂರು: ಕುತ್ಲೂರು ಸರಕಾರಿ ಶಾಲೆಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ.

ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡುತ್ತಿದ್ದರು. ಊರಿನ ಜನ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿದಾಗ ಸಾಮೂಹಿಕ ಪ್ರಯತ್ನ ದಿಂದ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ. ನಾನು ಕಿತ್ತಳೆ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಕ್ತಿ. ನನ್ನ ಊರಿಗೆ ಸರಕಾರಿ ಶಾಲೆ ಆಗಬೇಕೆಂಬ ಇಚ್ಛೆಯಿಂದ ಜನಪ್ರತಿನಿಧಿಗಳು, ಮಾಧ್ಯಮಗಳು ಸೇರಿದಂತೆ ಶಿಕ್ಷಣದ ಆಸಕ್ತಿ ಹೊಂದಿರುವ ಜನರ ಸಹಕಾರ ದಿಂದ ನನ್ನ ಆಸೆ ಈಡೇರಿದೆ. ಅದೇ ರೀತಿ ಕುತ್ಲೂರಿನಲ್ಲಿಯೂ ಎಲ್ಲ ಜನರ ಸಹಕಾರದಿಂದ ಶಾಲಾ ತೋಟ, ಸಂಸ್ಥೆ ಬೆಳೆದು ಬಂದಿರುವುದು ನೋಡಿದಾಗ ಅತ್ಯಂತ ಹೆಚ್ಚು ಸಂತೋಷವಾಯಿತು ಎಂದು ಹಾಜಬ್ಬ ಹರ್ಷ ವ್ಯಕ್ತ ಪಡಿಸಿದರು.

ಶಾಲಾ ತೋಟದ ಉದ್ಘಾಟನೆ ಸಮಾರಂಭದಲ್ಲಿ ನಾರಾವಿ ಅಧ್ಯಕ್ಷ ರಾಜ ವರ್ಮ ಜೈನ್ ಅಧ್ಯಕ್ಷ ತೆ ವಹಿಸಿದ್ದರು. ಧರ್ಮಸ್ಥಳದ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ, ದ.ಕ ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಜೈನ್, ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಾಯಕ ಯೋಜನಾಧಿಕಾರಿ ಆನಂದ ಸುವರ್ಣ, ಇತರ ಅತಿಥಿ ಗಳಾದ ಜೀವಂಧರ ಕುಮಾರ್, ಸತೀಶ್ ಪಡಿವಾಳ್, ಕೃಷ್ಣ ಪ್ಪ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಮುಖ್ಯೋಪಾಧ್ಯಾಯರಾದ ರೂಪ ಕುಮಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಉಪಾಧ್ಯಕ್ಷ ಭಾಸ್ಕರ ರೈ ಕೆ,ಪತ್ರಕರ್ತ ಧನಕೀರ್ತಿ ಅರಿಗ, ಎಸ್ ಡಿಎಂಸಿ ಉಪಾಧ್ಯಕ್ಷ ರಾದ ಜ್ಯೋತಿ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್, ಉಪಸ್ಥಿತರಿದ್ದರು.

ಎಸ್ ಡಿಎಂ ಸಿ ಅಧ್ಯಕ್ಷ ರಾಮಚಂದ್ರ ಭಟ್ ಸ್ವಾಗತಿಸಿದರು. ಸತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನಿತಾ ವಂದಿಸಿದರು. ಇದೇ ಸಂದರ್ಭ ಶಾಲಾ ವಾರ್ಷಿಕೊತ್ಸವ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News