×
Ad

ಸುರತ್ಕಲ್: ಕೆಪಿಸಿಸಿ ಸದಸ್ಯರಾಗಿ ಸದಾಶಿವ ಶೆಟ್ಟಿ ನೇಮಕ

Update: 2023-12-04 22:19 IST

ಸುರತ್ಕಲ್: ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿದ್ದ ಸದಾಶಿವ ಶೆಟ್ಟಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ.

ರಾಜ್ಯಾಧ್ಯಕ್ಷರಿಂದ ಬಂದ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಅಲಿ ಹಾಗೂ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಶೋತ್ತಮ ಚಿತ್ರಾಪುರ ಅವರು ಸೋಮವಾರ ಸದಾಶಿವ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

ತಾವು ಎಂದಿನಂತೆ ಪಕ್ಷ ಸಂಘಟನೆಯ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷದ ಸಬಲೀಕರಣ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕು. ಈ ದೆಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ದೊರೆಯಲೆಂದು ಹಾರೈಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಅವರು ಹೊರಡಿಸಿರುವ ಅದೇಶ ಪತ್ರದಲ್ಲಿ ಶುಭಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News