ರಾಮಕೃಷ್ಣ ಮಿಷನ್‌ನ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಶ್ರಮದಾನ
Update: 2023-12-10 18:55 IST
ಮಂಗಳೂರು, ಡಿ.10: ರಾಮಕೃಷ್ಣ ಮಿಷನ್‌ನ ಸ್ವಚ್ಛ ಮಂಗಳೂರು ಅಭಿಯಾನದ ಎರಡನೇ ಆವೃತ್ತಿಯ ಮೂರನೇ ತಿಂಗಳ ಶ್ರಮದಾನವು ರವಿವಾರ ನಗರದ ಪಂಪ್‌ವೆಲ್ ಪರಿಸರದಲ್ಲಿ ಜರುಗಿತು.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದಜಿ ಸಾನಿಧ್ಯದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಐ.ಸಿ.ಎ.ಐ. ಮಂಗಳೂರು ವಿಭಾಗದ ಅಧ್ಯಕ್ಷ ಸಿಎ ಗೌತಮ್ ನಾಯಕ್ ಜಂಟಿಯಾಗಿ ಹಸಿರು ನಿಶಾನೆ ತೋರಿಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಕಾರ್ಪೊರೇಟರ್ ಸಂದೀಪ್ ಗರೋಡಿ, ಡಾ. ಸತೀಶ್‌ರಾವ್, ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ್‌ರಾವ್, ಉದ್ಯಮಿ ನಂದನ್ ಮಲ್ಯ ಉಪಸ್ಥಿತರಿದ್ದರು.