ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ
Update: 2023-12-11 19:37 IST
ಮಂಗಳೂರು : ಕೃಷಿ ಇಲಾಖೆಯಿಂದ ರಾಜ್ಯಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ನಡೆಯಲಿದ್ದು, ಅದಕ್ಕೆ ಪೂರ್ವಭಾಯಾಗಿ ಜಿಲ್ಲಾ ಮಟ್ಟದಲ್ಲಿ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.18ರೊಳಗೆ jdagrimng@gmail.com
ಹೆಚ್ಚಿನ ಮಾಹಿತಿಗೆ 0824-2423604, ಮೊ.ಸಂ:8277928889ನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.