ಕಾಟಿಪಳ್ಳ ಹಸನಬ್ಬ ಮಾಸ್ಟರ್ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ
ಮಂಗಳೂರು: ಕಾಟಿಪಳ್ಳದ ನೂರುಲ್ ಹುದಾ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಹಸನಬ್ಬ ಮಾಸ್ತರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಕಾಲೇಜಿನ ಬಳಿಯ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಕ್ಸ್‌ಪರ್ಟೈಸ್ ಕಂಪೆನಿಯ ನಿರ್ದೇಶಕ ಕೆ.ಎಸ್ ಅಬ್ದುಲ್ ರಹಿಮಾನ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಕಲಿಕೆಯಲ್ಲಿ ಬದ್ಧತೆ ಮೈಗೂಡಿಸಿಕೊಂಡರೆ ಜೀವನದಲ್ಲಿ ಯಶಸ್ಸನ್ನು ಪಡೆಯಬಹುದು ಎಂದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದಕ್ಕೆ ಕಾಲೇಜಿನ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಪಣಂಬೂರು ನಗದು ಬಹುಮಾನ ನೀಡಿ ಸನ್ಮಾನಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಂಚಾಲಕ ಪಿ.ಎ.ಇಲ್ಯಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲೆ ರೇಖಾ ಬಿ.ವರದಿ ವಾಚಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಪಿ.ಎ.ಎಂ.ಶರೀಫ್, ಟ್ರಸ್ಟಿ ಪಿ.ಅಬ್ದುಲ್ ಹಮೀದ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕೆ.ಮುಹಮ್ಮದ್ ಬಾವ, ಕಾಲೇಜು ವಿದ್ಯಾರ್ಥಿ ನಾಯಕ ಮುಹಮ್ಮದ್ ಆಶಿಖ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ರಫಾ ಸ್ವಾಗತಿಸಿದರು. ನಸೀಫಾ ವಂದಿಸಿದರು. ಜುವೈರಿಯ ಬಾನು ಮತ್ತು ಮಿಸ್ರಿಯ ಕಾರ್ಯಕ್ರಮ ನಿರೂಪಿಸಿದರು.