ಜುಮಾದಿಲ್ ಆಖಿರ್ ತಿಂಗಳು ಪ್ರಾರಂಭ
Update: 2023-12-14 18:01 IST
ಮಂಗಳೂರು, ಡಿ.14: ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಜುಮಾದಿಲ್ ಆಖಿರ್ ತಿಂಗಳ ಚಂದ್ರದರ್ಶನವಾದ ಯಾವುದೇ ಮಾಹಿತಿ ಇಲ್ಲದ ಕಾರಣ ಗುರುವಾರ ಅಸ್ತಮಿಸಿದ ಶುಕ್ರವಾರ ಜುಮಾದಿಲ್ ಆಖಿರ್ 1 ಆಗಿರುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತೀರ್ಮಾನಿಸಿರುವುದಾಗಿ ಮಸ್ಜಿದ್ ಝೀನತ್ ಭಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.