×
Ad

ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅಬ್ದುಲ್ ರಹ್ಮಾನ್ ಆಯ್ಕೆ

Update: 2023-12-14 18:10 IST

ಉಳ್ಳಾಲ, ಡಿ.14: ಮಾಸ್ಟರ್ಸ್ ಅಸೋಸಿಯೇಶನ್ ಆಫ್ ಕೇರಳ ಇದರ ಸಹಭಾಗಿತ್ವದಲ್ಲಿ ಕೇರಳದ ನೀಲೇಶ್ವರ ಇಎಂಎಸ್ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಆಹ್ವಾನಿತ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಅಬ್ದುಲ್ ರಹ್ಮಾನ್ 100 ಮತ್ತು 200 ಮೀಟರ್ ಓಟದಲ್ಲಿ ಚಿನ್ನದ ಪದಕ ಹಾಗೂ 4/100 ಮೀಟರ್ ರಿಲೆಯಲ್ಲಿ ಬೆಳ್ಳಿಯ ಪದಕ ಗಳಿಸಿರುತ್ತಾರೆ.

ಫೆಬ್ರವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇವರು ಆಯ್ಕೆಯಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News