ಮಂಗಳೂರು: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ
Update: 2023-12-15 20:12 IST
ಮಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿ.16 ಮತ್ತು 17ರಂದು ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಯು ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಡಿ.16ರಂದು ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ರಥಬೀದಿಯ ಸರಕಾರಿ ಪಿಯು ಮಹಿಳಾ ಕಾಲೇಜು, ಡಿ.17ರಂದು ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ರಥಬೀದಿಯ ಸರಕಾರಿ ಪಿಯು ಮಹಿಳಾ ಕಾಲೇಜು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಲ್ಮಠದ ಸರಕಾರಿ ಪಿಯು ಮಹಿಳಾ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.
ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಯನ್ನು ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತ ಸಿದ್ಧಾರ್ಡ್ ಗೋಯಲ್ ಆದೇಶಿಸಿದ್ದಾರೆ.