×
Ad

ಪುತ್ತೂರು ನಗರಸಭೆ ಉಪಚುನಾವಣೆ: ತ್ರಿಕೋನ ಸ್ಪರ್ಧೆಗೆ ವೇದಿಕೆ ಸಜ್ಜು

Update: 2023-12-15 22:41 IST

ಪುತ್ತೂರು; ನಗರಸಭಾ ಸದಸ್ಯರಿಬ್ಬರ ನಿಧನದಿಂದಾಗಿ ತೆರವುಗೊಂಡಿದ್ದ ಪುತ್ತೂರು ನಗರಸಭೆಯ ಎರಡು ವಾರ್ಡ್‍ಗಳಿಗೆ ಡಿ. 27ರಂದು ಉಪ ಚುನಾವಣೆ ನಡೆಲಿದ್ದು, ಈಗಾಗಲೇ ಚುನಾವಣೆಯ ಕಾವು ಬಿರುಸುಗೊಂಡಿದೆ. ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆಗೆ ಈ ಬಾರಿ ಪುತ್ತಿಲ ಪರಿವಾರದ ಅಭ್ಯರ್ಥಿಗಳೂ ಸ್ಪರ್ಧೆಗೆ ಅಣಿಯಾಗಿದ್ದಾರೆ. ಈಗಾಗಲೇ 6 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪುತ್ತಿಲ ಪರಿವಾರದಿಂದ ವಾರ್ಡ್ ಸಂಖ್ಯೆ 1ರ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ.ರಾವ್ ಮತ್ತು ವಾರ್ಡ್ ಸಂಖ್ಯೆ 11 ರ ಅಭ್ಯರ್ಥಿ ಚಿಂತನ್ ಅವರನ್ನು ಪಕ್ಷವು ಆಯ್ಕೆ ಮಾಡಿದ್ದು, ಗುರುವಾರ ಅನ್ನಪೂರ್ಣ ಮತ್ತು ಚಿಂತನ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಜೆಪಿಯಿಂದ ವಾರ್ಡ್ ಸಂಖ್ಯೆ 1ರ ಅಭ್ಯರ್ಥಿಯಾಗಿ ನುನಿತಾ ಮತ್ತು ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರನ್ನು ಆಯ್ಕೆ ಮಾಡಿದೆ. ಇಬ್ಬರು ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಆಭ್ಯರ್ಥಿಗಳು ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖ ನಾಯಕರು, ಕಾರ್ಯಕರ್ತರೊಂದಿಗೆ ನಗರಸಭೆಗೆ ತೆರಳಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಅಭ್ಯರ್ಥಿಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಡಾ. ಸುರೇಶ್ ಪುತ್ತೂರಾಯ, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಕಾಲ್ನಡಿಗೆ ಮೂಲಕ ನಗರಸಭೆ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್‍ನಿಂದ ವಾರ್ಡ್ ಸಂಖ್ಯೆ 1ರ ಅಭ್ಯರ್ಥಿಯಾಗಿ ದಿನೇಶ್ ಸೇವಿರೆ ಮತ್ತು ವಾರ್ಡ್ ಸಂಖ್ಯೆ 11ರ ಅಭ್ಯರ್ಥಿಯಾಗಿ ದಾಮೋದರ ಭಂಡಾರ್ಕರ್ ಅವರನ್ನು ಪಕ್ಷವು ಆಯ್ಕೆ ಮಾಡಿದ್ದು, ಶುಕ್ರವಾರ ಪಕ್ಷದ ಮುಖಂಡರ ಜೊತೆಗೆ ಆಗಮಿಸಿ ದಿನೇಶ್ ಮತ್ತು ದಾಮೋದರ ಭಂಡಾರ್ಕರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News