×
Ad

ಮೊಬೈಲ್ ಕಳವು ಪ್ರಕರಣ : ಆರೋಪಿಗಳ ಸೆರೆ

Update: 2023-12-16 21:34 IST

ಮಂಗಳೂರು, ಡಿ.16: ನಗರದ ಬಂದರ್ ಮೀನುಗಾರಿಕಾ ದಕ್ಕೆಯಲ್ಲಿ ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ತಮಿಳುನಾಡಿನ ಕುಣ್ಣನ್ ಯಾನೆ ಗುಣ(23) ಮತ್ತು ರಾಮಕಿ (25) ಬಂಧಿತ ಆರೋಪಿಗಳು.

ನಗರದ ಗೂಡ್ಸ್‌ಶೆಡ್ಡೆಯ ಬಳಿ ಎಸ್ಸೈ ಮನೋಹರ್ ಪ್ರಸಾದ್ ಮತ್ತು ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದಾಗ ಅನುಮಾನಸ್ಪ ದವಾಗಿ ಇಬ್ಬರು ವ್ಯಕ್ತಿಗಳು ಮೊಬೈಲ್ ನೋಡುತ್ತಿರುವುದನ್ನು ಕಂಡು ಪ್ರಶ್ನಿಸಿದಾಗ ಸರಿಯಾದ ಉತ್ತರ ನೀಡಲಿಲ್ಲ. ಸಂಶಯದ ಮೇರೆಗೆ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಕಳವು ಮಾಡಿರುವ ಬಗ್ಗೆ ಬಾಯ್ಬಿಟ್ಟರು ಎನ್ನಲಾಗಿದೆ.

ಆರೋಪಿಗಳು ಪ್ಲಾಸ್ಟಿಕ್ ಕವರ್‌ನಲ್ಲಿಟ್ಟುಕೊಂಡಿದ್ದ 5 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬಂದರ್ ದಕ್ಕೆ ಪರಿಸರದಲ್ಲಿ ಕೆಲಸ ಮಾಡಿಕೊಂಡಿದ್ದು ಅಲ್ಲಿಯೇ ಮೊಬೈಲ್‌ಗಳನ್ನು ಕಳವು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News