×
Ad

ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್,ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳಿಗೆ ಅಭಿನಂದನೆ

Update: 2023-12-17 19:38 IST

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಮತ್ತು ದ.ಕ. ಜಿಕಲ್ಲೆ ಹಾಗೂ ಮೂಡಬಿದಿರೆಯ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಇಲ್ಲಿನ ಸ್ವರಾಜ್ ಮೈದಾನದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ 2022-23ನೇ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್, ರೋವರ್ಸ್, ರೇಂಜರ್ಸ್‌ಗಳಿಗೆ ರಾಜ್ಯ ಮಟ್ಟದ ಅಭಿನಂದನಾ ಕಾರ್ಯಕ್ರಮವು ರವಿವಾರ ನಡೆಯಿತು.

ದ.ಕ.ಸ್ಕೌಟ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ. ಮೋಹನ್ ಆಳ್ವ ಉದ್ಘಾಟಿಸಿದರು. ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಡಿಡಿಪಿಯು ಜಯಣ್ಣ ಸಿಡಿ, ಉದ್ಯಮಿ ಕೆ. ಶ್ರೀಪತಿ ಭಟ್, ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಕೆ. ಗಂಗಪ್ಪ ಗೌಡ, ರಾಜ್ಯ ಜೊತೆ ಕಾರ್ಯದರ್ಶಿ ಬಿವಿ ರಾಮಲತಾ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ್ ಭಟ್, ರಾಜ್ಯ ರೆಂಜರಿಂಗ್ ಮೇಲ್ವಿಚಾರಕಿ ಮಲ್ಲೇಶ್ವರಿ ಜುಜಾರೆ, ಉಡುಪಿ ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಪೈ, ಜಿಲ್ಲಾ ಸಹಾಯಕ ಕಾರ್ಯದರ್ಶಿ ವಸಂತ್ ದೇವಾಡಿಗ, ಸ್ಕೌಟ್ ತರಬೇತಿ ಆಯುಕ್ತ ಪ್ರತೀಮ್ ಕುಮಾರ್, ಜಿಲ್ಲಾ ಗೈಡ್ ಆಯುಕ್ತೆ ಜಯಶ್ರ್ತೀ, ಜಿಲ್ಲಾ ಸ್ಕೌಟ್ ಸಂಘಟನಾ ಆಯುಕ್ತ ಶಾಂತರಾಮ ಪ್ರಭು, ಜಿಲ್ಲಾ ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಸ್ಟೆಮ್ ಮತ್ತು ಔಷಧೀಯ ಸಸ್ಯಗಳ ಮಾಹಿತಿ ಶಿಬಿರದ ನಾಯಕರಾದ ವೆಂಕಟ್ ರಾವ್, ಮಧುಶ್ರೀ ಉಪಸ್ಥಿತರಿದ್ದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಪ್ರಮಾಣ ಪತ್ರ ವಾಚಿಸಿದರು. ನವೀನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News