×
Ad

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2023-12-18 21:02 IST

ಧರ್ಮಸ್ಥಳ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ 2024ರ ಜ.5,6,7ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಶ್ರೀಕ್ಷೇತ್ರ ಧರ್ಮ ಸ್ಥಳದಲ್ಲಿ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯ ದರ್ಶಿ ವೀರು ಶೆಟ್ಟಿ ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಹಿರಿಯ ಪತ್ರಕರ್ತರಾದ ಕೇಶವ ಕುಂದರ್, ಆರ್.ಎನ್. ಪೂವಣಿ, ಝಿ ಕನ್ನಡ ಡ್ರಾಮ ಜ್ಯೂನಿಯರ್ ಖ್ಯಾತಿಯ ರಿಷಿಕಾ ಕುಂದೇಶ್ವರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News