×
Ad

ಉಪ್ಪಿನಂಗಡಿ: ಮಾದಕ ವಸ್ತು ಸಾಗಾಟ; ಆರೋಪಿ ಬಂಧನ

Update: 2023-12-18 22:36 IST

ಉಪ್ಪಿನಂಗಡಿ: ಇಲ್ಲಿನ ಕೂಟೇಲು ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಂದ ಮಾದಕ ವಸ್ತು ಮತ್ತಿತರ ಸಾಮಗ್ರಿಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.

ಬೆಳ್ತಂಗಡಿ ಇಳಂತಿಲ ಗ್ರಾಮದ ನಿವಾಸಿ ಯಾಸಿರ್ (29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿ ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ಕಾರೊಂದರ ಚಾಲಕನು ವಾಹನವನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ತಡೆದು ವಿಚಾರಿಸಿ, ಕಾರನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು ರೂ 13,000/- ಮೌಲ್ಯದ 6.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆಯಾಗಿದೆ.

ಕಾರಿನಲ್ಲಿದ್ದ ಡಿಜಿಟಲ್ ತೂಕಮಾಪನ, ಮೊಬೈಲ್ ಮತ್ತು ಎಂ.ಡಿ.ಎಂ.ಎ ಮಾದಕ ವಸ್ತುವಿನೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News