×
Ad

ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಮಾದರಿಯಾಗಲಿ : ಯು.ಟಿ.ಖಾದರ್

Update: 2023-12-19 21:04 IST

ಮಂಗಳೂರು: ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ರಾಜ್ಯ ಮಟ್ಟದ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ ಪಂದ್ಯಾವಳಿ’ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ಬಗ್ಗೆ ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಅಡ್ಕಸ್ಥಳ , ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಮುಹಮ್ಮದ್ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ, ಸಂದೇಶ್ ಜಾರ,ಸುಖ್‌ಪಾಲ್ ಪೊಳಲಿ ಮೊದಲಾದವರು ಉಪಸ್ಥಿತರಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News