×
Ad

ಮಂಜನಾಡಿ ಉರೂಸ್ ಉದ್ಘಾಟನೆ

Update: 2023-12-21 20:52 IST

ಮಂಜನಾಡಿ: ಮುಸ್ಲಿಂ ಸಮುದಾಯ ಅಭಿವೃದ್ಧಿಯತ್ತ ಹೆಜ್ಜೆ ‌ಇಡುತ್ತಿದೆ. ಮುಸ್ಲಿಂ ಯುವಕ, ಯುವತಿಯರು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ಹಾಗೂ ವಯಸ್ಸಿಗೆ ಬಂದ ಹೆಣ್ಣು ಮಕ್ಕಳ ವಿವಾಹ ಕೂಡಾ ಶೀಘ್ರ ಆಗಬೇಕಾದ ಪರಿಸ್ಥಿತಿ ಇದೆ. ನಮ್ಮ ಮಕ್ಕಳನ್ನು ಕಾಪಾಡುವ ಜವಾಬ್ದಾರಿ ನಮ್ಮದಾಗಿದೆ ಎಂದು ಡಾ.ಹಕೀಂ ಅಝ್ ಅರಿ ಹೇಳಿದರು.

ಅವರು ಮಂಜನಾಡಿ ಉರೂಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಂಜನಾಡಿ ಮುದರ್ರಿಸ್ ಅಹ್ಮದ್ ಬಾಖವಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಧ್ಯಕ್ಷ ಮೈಸೂರು ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಮುದರ್ರಿಸ್ ಮುಹಮ್ಮದ್ ಮಸೂದ್ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಪ್ರದಾನ ಕಾರ್ಯದರ್ಶಿ ಅಝೀಝ್ ಪರ್ತಿಪ್ಪಾಡಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News