×
Ad

ಉಳ್ಳಾಲ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್‌ನಿಂದ ಚಿಣ್ಣರ ಕಲರವ

Update: 2023-12-23 19:13 IST

ಮಂಗಳೂರು,ಡಿ.23: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಉಳ್ಳಾಲ ತಾಲೂಕು ಘಟಕದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸ್ವರ್ಣ ಸಂಭ್ರಮ, ಪರಿಷತ್ ಪದಾಧಿಕಾರಿಗಳ ಪದಗ್ರಹಣ, ಚಿಣ್ಣರ ಕಲರವ ಕಾರ್ಯಕ್ರಮವು ತೊಕ್ಕೊಟ್ಟಿನ ಗಟ್ಟಿ ಸಮಾಜ ಭವನದಲ್ಲಿ ಇತ್ತೀಚೆಗೆ ನಡೆಯಿತು.

ರಾಜ್ಯ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಉಳ್ಳಾಲದಲ್ಲಿ ಪ್ರಥಮ ಬಾರಿಗೆ ನಡೆದ ಈ ಕಾರ್ಯಕ್ರಮವು ಮತ್ತಷ್ಟು ಯೋಜನೆಗಳಿಗೆ ನಾಂದಿಯಾಗಲಿ ಎಂದರು.

ಹಳೆಕೋಟೆ ಸೈಯದ್ ಮದನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಫಾತಿಮಾ ಶಿಫಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್, ಲೇಖಕಿ ರೋಹಿಣಿ ಬಿ.ಎಂ. ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಎನ್.ಅಶೋಕ್, ಜಿಲ್ಲಾಧ್ಯಕ್ಷೆ ಪರಿಮಳಾ ರಾವ್, ಕ್ಷೇತ್ರ ಶಿಕ್ಷಣಾಧಿ ಕಾರಿ ಈಶ್ವರ್ ಎಚ್.ಆರ್., ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ ಆಳ್ವ, ಉಳ್ಳಾಲ ಠಾಣೆಯ ಇನ್‌ಸ್ಪೆಕ್ಟರ್ ಬಾಲಕೃಷ್ಣ ಎಚ್.ಎನ್, ಸಾಮಾಜಿಕ ಕಾರ್ಯಕರ್ತರಾದ ಸುರೇಶ್ ಭಟ್ನಗರ್, ರತ್ನಾಕರ ಗಟ್ಟಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಅಧ್ಯಕ್ಷೆ ಸಿಹಾನಾ ಬಿ.ಎಂ. ಸ್ವಾಗತಿಸಿದರು. ಜಾಯ್ ಲ್ಯಾಂಡ್ ಶಾಲೆಯ ಮಕ್ಕಳು ನಾಡಗೀತೆ ಹಾಡಿದರು. ದಾಕ್ಷಾಯಿನಿ ಮತ್ತು ಅಸ್ಮತ್ ಕಾರ್ಯಕ್ರಮ ನಿರೂಪಿಸಿದರು. ದೇವಕಿ ಆರ್. ಉಳ್ಳಾಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News