ಮೂಡುಬಿದಿರೆ : ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
Update: 2023-12-24 19:31 IST
ಮೂಡುಬಿದಿರೆ : ಪಿಯು ಕಾಲೇಜೊಂದರ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಗದಗ ಜಿಲ್ಲೆಯ ಕದಂಪುರ ನಿವಾಸಿ ಮಲ್ಲಪ್ಪ ಕವಲೂರ್ ಎಂಬವರ ಪುತ್ರ ಮನೋಜ್ ಕವಲೂರ್(17) ಎಂದು ಗುರುತಿಸಲಾಗಿದೆ.
ಮನೋಜ್ ಹಾಸ್ಟೆಲ್ ನಲ್ಲಿ ವಾಸ್ತವ್ಯ ಇದ್ದು, ಟಾಯ್ಲೆಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.