ಮಹಿಳೆಯರನ್ನು ಅವಮಾನಿಸಿದ ಆರೋಪ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು
ಸುರತ್ಕಲ್: ಮಹಿಳೆಯರನ್ನು ಅವಮಾನಿಸಿ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಾತನಾಡಿರುವ ಆರ್‌ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯ ವತಿಯಿಂದ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಇತರ ಸಮುದಾಯಗಳನ್ನು ಪರಸ್ಪರ ಎತ್ತಿಕಟ್ಟಿ ಕೋಮುಗಲಭೆಗೆ ಪ್ರಭಾಕರ ಭಟ್ ಪ್ರಚೋದನೆ ನೀಡಿದ್ದಾರೆ ಎಂದು ವಿಮ್ ನೀಡಿರುವ ದೂರಿನಲ್ಲಿ ತಿಳಿಸಿದೆ.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದೆ.
ಈ ಸಂಧರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾ ಕಾರ್ಯದರ್ಶಿ ಅಝ್ವೀನ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷೆ ಅಫ್ಸ, ಕಾರ್ಯದರ್ಶಿ ನಸೀಮಾ ಹಾಗೂ ಸದಸ್ಯೆ ಸೆಲಿಕತ್ ಉಪಸ್ಥಿತರಿದ್ದರು.