ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2023-12-27 21:53 IST
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 8 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ ತರಕಾರಿ ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರಿನ 5ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಸಂತೋಷ ಬೆಳ್ತಂಗಡಿ ತಾಲೂಕಿನ ಚಿಬಿದ್ರೆಗೆ ಬಂದಿರುವ ಮಾಹಿತಿಯಂತೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಮಾರ್ಗದರ್ಶನದಂತೆ ಡಿ.22ರಂದು ಸಂಜೆ 5:45ಕ್ಕೆ ಧರ್ಮಸ್ಥಳ ಠಾಣಾ ಎಚ್‌ಸಿ ರಾಜೇಶ್ ಎನ್, ಪಿಸಿಗಳಾದ ಗೋವಿಂದರಾಜ್, ಯೋಗೀಶ್ ಅವರು ಚಿಭಿದ್ರೆ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ.