×
Ad

ಮತದಾರರ ಪಟ್ಟಿ ಅವಧಿ ವಿಸ್ತರಣೆ

Update: 2023-12-28 19:47 IST

ಮಂಗಳೂರು: ಭಾರತ ಚುನಾವಣಾ ಆಯೋಗವು 2024ರ ಜನವರಿ 1ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆ ಅರ್ಜಿ ಫಾರ್ಮ್ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು 2024ರ ಜನವರಿ 12ಕ್ಕೆ ವಿಸ್ತರಿಸಲಾಗಿದೆ. ದತ್ತಾಂಶಗಳ ಕ್ರೋಢೀಕರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನವರಿ 17ಕ್ಕೆ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕವನ್ನು ಜನವರಿ 22ಕ್ಕೆ ವಿಸ್ತರಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News