ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನಡೆಗೆ ಮುನೀರ್ ಕಾಟಿಪಳ್ಳ ಖಂಡನೆ
ಮುನೀರ್ ಕಾಟಿಪಳ್ಳ
ಮಂಗಳೂರು,ಡಿ.31: ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 15ರಿಂದ 20 ಕಾರ್ಯಕರ್ತರು ಸೇರಿ ವಾಹನ ಓಡಾಟಕ್ಕೆ ತೊಂದರೆಯಾಗದಂತೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಅಂಚಿನಲ್ಲಿ ಧ್ವನಿ ವರ್ಧಕ ಬಳಸದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ಡಿವೈಎಫ್‌ಐ ಕಾರ್ಯಕರ್ತರು, ಹಿರಿಯ ಕಮ್ಯನಿಸ್ಟ್ ಮುಖಂಡರ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿರುವುದು ಖಂಡನೀಯವಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಏನಿದು, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ? ಮಂಗಳೂರು ಕಮೀಷನರೇಟ್ ಪ್ರತ್ಯೇಕ ರಾಜ್ಯವೆ ? ಕಲ್ಲಡ್ಕ ಭಟ್ಟರ ವಸಾಹತೆ ? ಪೊಲೀಸರ ಈ ಕ್ರಮದ ಬಗ್ಗೆ ರಾಜ್ಯ ಸರಕಾರ, ಕಾಂಗ್ರೆಸ್ ಪಕ್ಷ ಉತ್ತರಿಸುತ್ತದೆಯೆ ? ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಉತ್ತರಿಸುತ್ತಾರೆಯೆ ? ಕೋಮುವಾದಿ ದ್ವೇಷ ಭಾಷಣಕಾರರಿಗೊಂದು ನ್ಯಾಯ ಮತ್ತು ಬಡವರ, ಕಾರ್ಮಿಕರ, ಅಲ್ಪಸಂಖ್ಯಾತರ, ನ್ಯಾಯದ ಪರ ಇರುವ ರಾಜಕೀಯ ಕಾರ್ಯಕರ್ತರಿಗೊಂದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.