×
Ad

ವಿದ್ಯುತ್ ಆಘಾತ: ಯುವಕ ಮೃತ್ಯು

Update: 2024-01-05 21:15 IST

ಸುಳ್ಯ : ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಪ ಎಂಬಲ್ಲಿ ಇಂದು ಸಂಭವಿಸಿದೆ.

ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್ ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತರು.

ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News