×
Ad

ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತಗೊಳಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

Update: 2024-01-09 20:04 IST

ಮಂಗಳೂರು: ನಗರದಲ್ಲಿ ಸ್ಮಾಟ್ ಸಿಟಿ ಕಾಮಗಾರಿಯಗಳನ್ನು ಕೈಗೊಂಡು ಐದು ವರ್ಷಗಳು ಕಳೆದಿವೆ. ಆದರೆ ಕೆಲಸಗಳು ನಿಗದಿತ ಅವಧಿಯಲ್ಲಿ ಮುಗಿದಿಲ್ಲ. ಹಾಗಾಗಿ ಸ್ಮಾರ್ಟ್ ಸಿಟಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ ಮಂಗಳವಾರ ತನ್ನ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು ಕದ್ರಿ ಪಾರ್ಕ್ ಬಳಿ ನಿರ್ಮಿಸಲಾದ ಅಂಗಡಿಗಳ ಹರಾಜು ಪ್ರಕ್ರಿಯೆ ಮುಗಿಸಬೇಕು, ಫುಡ್ ಕೋರ್ಟ್‌ಗಳಿಗೆ ಪ್ರತ್ಯೇಕ ಘಟಕವನ್ನು ರೂಪಿಸಬೇಕು. ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್ ರಸ್ತೆ ಗಳನ್ನು ಏಕೀಕೃತವಾಗಿ ನಿರ್ವಹಣೆ ಮಾಡಲು ಗುತ್ತಿಗೆ ನೀಡುವ ಬಗ್ಗೆ ಪರಿಶೀಲಿಸಲು ಸೂಚಿಸಿದರು.

ಮೀನುಗಾರಿಕಾ ಕಾಲೇಜಿನಲ್ಲಿ ನಿರ್ಮಿಸಲಾದ ಕೌಶಲ ತರಬೇತಿ ಕೇಂದ್ರದಲ್ಲಿ ಕೌಶಲ ಅಭಿವೃದ್ಧಿ ತರಬೇತಿಗಳನ್ನು ಫೆಬ್ರವರಿಯಿಂದ ಆರಂಭಿಸಲು ಈಗಾಗಲೇ ವೇಳಾಪಟ್ಟಿ ತಯಾರಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಲಾಭಿಮುಖ ರಸ್ತೆ ನಿರ್ಮಾಣದಲ್ಲಿ ಜಮೀನು ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಹರಿಸಿ ಕೊಳ್ಳುವಂತೆ ಸೂಚಿಸಿದ ಡಿಸಿ ಬಂದರು ಇಲಾಖೆಯ ಭೂಮಿಯನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಲು ತಿಳಿಸಿದರು. ಎಮ್ಮೆಕೆರೆ ಈಜುಕೊಳವನ್ನು ಈಜು ಫೆಡರೇಶನ್, ಅಕಾಡಮಿಗಳಿಗೆ ಕಾರ್ಯಕ್ರಮಗಳನ್ನು ಆಯೋಜಿಸುವ ಜವಾಬ್ದಾರಿ ನೀಡಬೇಕು. ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸ ಡಿಸಿ ಸಲಹೆ ನೀಡಿದರು.

ಸಭೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿ, ಆಯುಕ್ತ ಆನಂದ್, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣ ಪ್ರಭ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News