×
Ad

ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

Update: 2024-01-10 18:13 IST

ಮಂಗಳೂರು: ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ (ರಿ) ಬರ್ಕೆ ಮಂಗಳೂರು ಇದರ ವತಿಯಿಂದ ಫೆ.25ರಂದು ನಗರದ ಬೋಳಾರದ ಶಾದಿಮಹಲ್‌ನಲ್ಲಿ ಆರ್ಥಿಕವಾಗಿ ಹಿಂದುಳಿದ ಅರ್ಹ 10 ಹೆಣ್ಣು ಮಕ್ಕಳ ಮದುವೆ ಮಾಡಲು ತಿರ್ಮಾನಿಸಲಾಗಿದೆ ಎಂದು ಟ್ರಸ್ಟಿನ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿರುತ್ತಾರೆ.

ಆಸಕ್ತಿಯುಳ್ಳವರು ಜನವರಿ 30ರ ಒಳಗೆ ಅರ್ಜಿಯನ್ನು ದಿ ಮುಸ್ಲಿಂ ಸೆಂಟ್ರಲ್ ಕಮಿಟಿ, ಅಝೀಝುದ್ದೀನ್ ರಸ್ತೆ, ಬಂದರ್ ಮಂಗಳೂರು ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9019144555, 9945999806ನ್ನು ಸಂಪರ್ಕಿಸಬಹುದು ಎಂದು ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಡಾ. ಮುಹಮ್ಮದ್ ಆರೀಫ್ ಮಸೂದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News